ಮಂಗಳೂರು(ವಿಟ್ಲ) : ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಪಿಕಪ್ ವಾಹನವೊಂದು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಮೇಲೆ ಬಿದ್ದ ಘಟನೆ ಅ.4ರ ಮುಂಜಾನೆ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಗೆ ಬಿದ್ದು ನಿಂತಿದೆ. ನಿದ್ದೆಯ ಮಂಪರಿನಲ್ಲಿ ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ. ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.