ಬೈಕ್‌ ಗೆ ಕಾರು ಡಿಕ್ಕಿ – ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್‌ ಸವಾರ ವಿಧಿವಶ

ಮಂಗಳೂರು(ಬಂಟ್ವಾಳ): ಬೈಕ್‌ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರ ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ ಉಡುಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶ್ರೀನಿವಾಸ್‌ ಅವರು ಬಂಟ್ವಾಳದಿಂದ ಬರುತ್ತಿರುವ ವೇಳೆ ಕಾಮಾಜೆ ಕ್ರಾಸ್‌ ಬಳಿ ಹಿಂಬಂದಿಯಿಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್‌ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಶ್ರೀನಿವಾಸ್‌ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here