ಮಂಗಳೂರು: ಮಿಷನ್ ಇಂದ್ರ ಧನುಷ್ 5.0 ಕಾರ್ಯಕ್ರಮವು ಅ.9 ರಿಂದ 14ರ ವರೆಗೆ ನಡೆಯಲಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆರ್ ಸಿ ಹೆಚ್ ಅಧಿಕಾರಿ ಡಾ.ರಾಜೇಶ್ ತಿಳಿಸಿದ್ದಾರೆ.
ಲಸಿಕಾ ವಂಚಿತ ಗರ್ಭಿಣಿಯರು ಮತ್ತು 5 ವರ್ಷದ ಒಳಗಿನ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆ ಸಹಭಾಗಿತ್ವದೊಂದಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ ಸಂಸ್ಥೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ನೆಹರು ಯುವ ಕೇಂದ್ರ, ಕ್ರೆಡಯಿ, ಯುವ ಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಲಸಿಕೆ ನೀಡುವ ಈ ಕಾರ್ಯಕ್ರಮ ಅ.9 ರಿಂದ 14ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ. ಇದಕ್ಕಾಗಿ 441 ಲಸಿಕಾ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಆರ್ ಸಿ ಹೆಚ್ ಅಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ.