ಮಂಗಳೂರು(ಕೊಣಾಜೆ): ಕೊಣಾಜೆ ಸಮೀಪದ ನಡುಪದವು ಬಳಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ನಾಯಿಯೊಂದು ಬಿದ್ದು ಲಾಕ್ ಆಗಿರುವ ಘಟನೆ ಇಂದು ನಡೆದಿದೆ.
ಕಳೆದ ಎರಡು ದಿನಗಳ ಹಿಂದೆ ನಡುಪದವಿನ ಮನೆಗಳಿರುವ ಪರಿಸರದ ಬಳಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಅರಣ್ಯ ಇಲಾಖೆಯವರು ಪರಿಸರದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇರಿಸಿದ್ದರು. ಆದರೆ ರವಿವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಹೋಗಿ ನೋಡಿದಾಗ ಗೂಡಿಗೆ ನಾಯಿಯೊಂದು ಬಿದ್ದಿರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯರು ನಾಯಿಯನ್ನು ಬೋನಿನಿಂದ ಹೊರಗೆ ಬಿಟ್ಟಿದ್ದಾರೆ.