ಮತ್ತೊಂದು ಪಟಾಕಿ ದುರಂತ – ತಮಿಳುನಾಡಿನಲ್ಲಿ ಪಟಾಕಿ ಅಂಗಡಿ ಸ್ಫೋಟ – 9 ಸಾವು-ಹಲವರಿಗೆ ಗಾಯ

ಮಂಗಳೂರು(ತಮಿಳುನಾಡು): ಅತ್ತಿಬೆಲೆಯಲ್ಲಿ ಪಟಾಕಿ ದುರಂತದಲ್ಲಿ ಮೃತಪಟ್ಟವರ ಚಿತೆಯ ಬೆಂಕಿ ಆರುವ ಮುನ್ನ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿದ್ದಾರೆ.

ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅ.9ರಂದು ಪಟಾಕಿ ತಯಾರಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ವ್ಯಾಪಿಸಿದ ಬೆಂಕಿಗೆ ಭಾರಿ ಶಬ್ಧದೊಂದಿಗೆ ಪಟಾಕಿ ಸ್ಫೋಟಗೊಂಡಿದೆ. ಪಟಾಕಿ ತಯಾರಿಕೆಯಲ್ಲಿ ನಿರತರಾಗಿದ್ದ ಜನರು ಬೆಂಕಿಗೆ ಆಹುತಿಯಾಗಿದ್ದಾರೆ. ಅವಘಡದಲ್ಲಿ ಮಹಿಳೆ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದು 6ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಣಹಾನಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here