ಮಂಗಳೂರು(ಕಾಸರಗೋಡು): ನುಳ್ಳಿಪ್ಪಾಡಿಯ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.
ಉದುಮ ಎಡಚ್ಚಕೈ ನಿವಾಸಿ ಫೈಝಲ್ (37) ಮತ್ತು ತಳಿಪರಂಬ ನಿವಾಸಿ ಸಿ.ಟಿ.ಅಬ್ದುಲ್ಲ(46) ಬಂಧಿತ ಆರೋಪಿಗಳು. ರವಿವಾರ ಸಂಜೆ ನುಳ್ಳಿಪ್ಪಾಡಿಯ ಖಾಸಗಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಗಾಂಜಾ ಹಸ್ತಾಂತರಿಸುತ್ತಿದ್ದಾಗ ಖಚಿತ ಮಾಹಿತಿಯಂತೆ ಹೊಂಚು ಹಾಕು ಕುಳಿತಿದ್ದ ಅಬಕಾರಿ ದಳದ ಸಿಬ್ಬಂದಿಗಳು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಎಂಟು ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಕಾರೊಂದನ್ನು ವಶಪಡಿಸಿಕೊಳ್ಳಲಾಗಿದೆ.