ರೋ ರೋ ಗೂಡ್ಸ್ ರೈಲಿನಲ್ಲಿದ್ದ ಲಾರಿಯೊಂದರಲ್ಲಿ ಆಕಸ್ಮಿಕ ಬೆಂಕಿ – ಬಿಜೂರು ರೈಲು ನಿಲ್ದಾಣ ಬಳಿ ಘಟನೆ

ಮಂಗಳೂರು(ಉಪ್ಪುಂದ): ತಿಂಡಿ ತಿನಿಸುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಬೆಂಕಿ ತಗುಲಿ ವಸ್ತುಗಳು ಸುಟ್ಟು ಹೋದ ಘಟನೆ ಬಿಜೂರು ರೈಲ್ವೆ ನಿಲ್ದಾಣದಲ್ಲಿ ಅ.10ರ ಮಂಗಳವಾರ ಮುಂಜಾನೆ ಸಂಭವಿಸಿದೆ.

ಅ.9 ರಂದು ಮುಂಬೈ ಕೋಲಾಡ್ ನಿಂದ ಮಂಗಳೂರು ಸುರತ್ಕಲ್ ಕಡೆಗೆ ಲಾರಿಗಳನ್ನು ಹೊತ್ತು ಸಾಗುತ್ತಿದ್ದ ರೋ ರೋ  ಗೂಡ್ಸ್ ರೈಲು ಮಂಗಳವಾರ ಮುಂಜಾನೆ ಬೈಂದೂರು ತಾಲೂಕಿನ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಬಂದಾಗ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಲಾರಿಯೊಂದರಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ನೋಡಿದ ಸಿಬಂದಿ ತಕ್ಷಣ ಗೂಡ್ಸ್ ರೈಲು ನಿಲ್ಲಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದ್ದಾರೆ. ಲಾರಿಯೊಳಗಿದ್ದ ತಿಂಡಿ ತಿನಿಸುಗಳು ಭಾಗಶಃ ಸುಟ್ಟು ಹೋಗಿದೆ.

 

LEAVE A REPLY

Please enter your comment!
Please enter your name here