ಮಂಗಳೂರು(ಬಂಟ್ವಾಳ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿ ಸೋಮನಗೌಡ ಎಂಬಾತ ಜೈ ಕರ್ನಾಟಕ ಎಂಬ ವಾಟ್ಸ್ಆಪ್ ಗ್ರೂಪ್ ನಲ್ಲಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಹರಿಯಬಿಟ್ಟಿರುವ ಬಗ್ಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.