ಭತ್ತದ ಬೆಳೆಯಲ್ಲಿ ಪುನೀತ್ ರಾಜಕುಮಾರ್ ಕಲಾಕೃತಿ – ಅಭಿಮಾನ ಮೆರೆದ ರಾಯಚೂರಿನ ರೈತ ಸತ್ಯನಾರಾಯಣ

ಮಂಗಳೂರು(ರಾಯಚೂರು): ರೈತರೊಬ್ಬರು ಜಪಾನ್ ತಂತ್ರಜ್ಞಾನ ಮೂಲಕ ವಿವಿಧ ಭತ್ತದ ತಳಿಗಳನ್ನು ಬೆಳೆದು ಕರ್ನಾಟಕ ರತ್ನ, ನಟ ಪುನೀತ್ ರಾಜಕುಮಾರ್ ಚಿತ್ರ ಬಿಡಿಸಿದ್ದಾರೆ.

ಸಿರವಾರ ತಾಲೂಕಿನ ಡೋಣಿ ಬಸವಣ್ಣ ಕ್ಯಾಂಪ್ ನ ರೈತ, ಅಪ್ಪು ಅಭಿಮಾನಿ ಸತ್ಯನಾರಾಯಣ ತನ್ನ ಎರಡು ಎಕರೆ ಗದ್ದೆಯಲ್ಲಿ ಜಪಾನ್ ತಂತ್ರಜ್ಞಾನ ಮೂಲಕ ವಿವಿಧ ಭತ್ತದ ತಳಿಗಳನ್ನು ಬೆಳೆದು ಅಪ್ಪು ಚಿತ್ರ ಬಿಡಿಸಿದ್ದಾರೆ. ತೆಲಂಗಾಣ, ಗುಜರಾತಿನಿಂದ ತಂದ ಕಾವೇರಿ, ಗೋಲ್ಡನ್ ರೋಸ್, ಕಾಲಭಟ್ಟಿ ಹೆಸರಿನ 100 ಕೆ.ಜಿ ಭತ್ತದ ಬೀಜಗಳನ್ನು ನೆಟ್ಟು ಸಾವಯವ ಪದ್ಧತಿಯಲ್ಲಿ ಬೆಳೆದು ಅಪ್ಪು ಮೇಲಿನ ಅಭಿಮಾನ ಮೆರೆದಿದ್ದಾರೆ. ಬರದ ನಡುವೆ ಟ್ಯಾಂಕರ್ ಮೂಲಕ ಗದ್ದೆಗೆ ನೀರು ಹಾಯಿಸಿ ಸುಮಾರು 3 ಲಕ್ಷ ರೂ. ಖರ್ಚು ಮಾಡಿ, ನಿತ್ಯ ನಿಗಾವಹಿಸಿ 90 ದಿನದ ಬೆಳೆಯಲ್ಲಿ ಅದ್ಭುತ ಕಲಾಚಿತ್ರ ಮೂಡಿಸಿದ್ದಾರೆ. ಭಾವಚಿತ್ರದ ಕೆಳಗೆ ‘ಕರ್ನಾಟಕ ರತ್ನ’ ಅನ್ನೋ ಅಕ್ಷರಗಳನ್ನೂ ಬೆಳೆಯಲ್ಲೇ ಬರೆದಿದ್ದಾರೆ.

LEAVE A REPLY

Please enter your comment!
Please enter your name here