ವಿಮಾನ ಯಾನ ಸಂಸ್ಥೆಯಲ್ಲಿ ಉದ್ಯೋಗದ ಆಮಿಷ –  ಯುವತಿಗೆ ಲಕ್ಷಾಂತರ ರೂ. ವಂಚನೆ – ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲು

    ಸುಳ್ಯ: ವಿಮಾನ ಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಅಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಳಕಿಗೆ ಬಂದಿದೆ.

    ವಿಮಾನದಲ್ಲಿ ಹಾರುವ ಕನಸು ಕಂಡಿದ್ದ ಯುವತಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿಯಾಗಿರುವ ಯುವತಿಗೆ ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದಾನೆ. ತಾನು ವಿಸ್ತಾರ ಏರ್ ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಕರೆಮಾಡುತ್ತಿರುವುದಾಗಿ ಹೇಳಿ ಪರಿಚಯಿಸಿಕೊಂಡಿದ್ದಾನೆ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಯುವತಿ ಪಾವತಿಸಿದ್ದಾಳೆ, ಬಳಿಕ ತಾನು ಮೋಸ ಹೋಗಿದ್ದೇನೆಂದು ಅರಿತು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

     

    LEAVE A REPLY

    Please enter your comment!
    Please enter your name here