ಕಾಂಗ್ರೆಸ್‌ ಸರ್ಕಾರದ ಭ್ರಷ್ಟ ಆಡಳಿತ ವಿರೋಧಿಸಿ ರಾಜ್ಯವ್ಯಾಪಿ ಹೋರಾಟ – ನಳಿನ್ ಕುಮಾರ್ ಕಟೀಲ್‌

ಮಂಗಳೂರು(ಬೆಂಗಳೂರು): ಕಾಂಗ್ರೆಸ್‌ ಸರ್ಕಾರದ ಭ್ರಷ್ಟ ಆಡಳಿತವನ್ನು ವಿರೋಧಿಸಿ ಸೋಮವಾರ ಮತ್ತು ಮಂಗಳವಾರ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಭಾನುವಾರ ಪ್ರಧಾನ ಕಾರ್ಯದರ್ಶಿಗಳ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ರಾಜೀನಾಮೆಗೆ ಆಗ್ರಹಿಸಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಸೋಮವಾರದಂದು ಜಿಲ್ಲೆಗಳಲ್ಲಿ, ಮಂಡಲಗಳ ಅಧ್ಯಕ್ಷರ ನೇತೃತ್ವದಲ್ಲಿ ಮಂಗಳವಾರ ಮಂಡಲಗಳ ಮಟ್ಟದಲ್ಲಿ ಹೋರಾಟ ನಡೆಸಲು ಸೂಚಿಸಲಾಗಿದೆ ಎಂದರು ಹೇಳಿದರು. ಅಧಿಕಾರಿಗಳಿಗೇ ರೇಟ್‌ ಫಿಕ್ಸ್‌ ಮಾಡಿದ ಸರ್ಕಾರವಿದು. ಅಧಿಕಾರಿಗಳಿಂದ ಭ್ರಷ್ಟಾಚಾರ ಆರಂಭಿಸಿದ ಈ ಸರ್ಕಾರದ ಕಾರ್ಯವು ಕಲಾವಿದರನ್ನು ಬಿಟ್ಟಿಲ್ಲ. ತಮ್ಮ ಬಳಿ ಲಂಚ ಕೇಳಿದ್ದಾಗಿ ಕಲಾವಿದರೇ ಆರೋಪ ಮಾಡುತ್ತಿದ್ದಾರೆ. ಹಿಂದೆ ಎಟಿಎಂ ಸರ್ಕಾರ ಬರುತ್ತದೆ ಎಂದು ಹೇಳಿದಾಗ, ಸಾಕ್ಷಿ ಕೊಡಿ ಎಂದಿದ್ದರು. ಇವತ್ತು ಸಾಕ್ಷಿ, ಆಧಾರಗಳನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರೇ ಜನರ ಮುಂದಿಟ್ಟಿದ್ದಾರೆ ಎಂದು ಹೇಳಿದರು.

ಗುತ್ತಿಗೆದಾರರಿಗೆ ₹600 ಕೋಟಿ ಬಿಡುಗಡೆ ಮಾಡಿದ ಎರಡೇ ದಿನಗಳಲ್ಲಿ ಗುತ್ತಿಗೆದಾರನೊಬ್ಬನ ಮನೆಯಲ್ಲಿ ₹42 ಕೋಟಿ ಸಿಕ್ಕಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನಳಿನ್ ಕುಮಾರ್ ಆಗ್ರಹಿಸಿದರು. ರಾಜ್ಯದಲ್ಲಿ ಜನರ ಹಣವನ್ನು ಲೂಟಿ ಮಾಡಿ ಪಂಚರಾಜ್ಯಗಳ ಚುನಾವಣೆಗೆ ಕಳುಹಿಸುತ್ತಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಗೆ ಕರ್ನಾಟಕವು ಎಟಿಎಂ ಆಗಿದೆ. ಇವತ್ತು ಇನ್ನೊಬ್ಬರ ಮನೆಯಲ್ಲೂ ಹಣ ಸಿಕ್ಕಿದೆ. ಇದೆಲ್ಲವೂ ಲೂಟಿ ಹಣ. ಈ ಬಗ್ಗೆ ದೂರು ಕೊಡುವ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ ಎಂದು ಅವರು ಹೇಳಿದರು.

 

 

LEAVE A REPLY

Please enter your comment!
Please enter your name here