ಮಂಗಳೂರು: ಉಳ್ಳಾಲ ಸೇತುವೆಯಲ್ಲಿ ಅ.16ರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಏಳು ವಾಹನಗಳಿಗೆ ಹಾನಿಯಾಗಿದೆ. ಅಲ್ಲದೆ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ನಗರದ ಪಂಪ್ವೆಲ್ನಿಂದ ತೊಕ್ಕೊಟ್ಟು ಕಡೆಗೆ ತೆರಳುವ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಡೀಸೆಲ್ ಖಾಲಿಯಾಗಿ ಲಾರಿಯೊಂದು ನಿಂತಿತ್ತು. ಅ.16ರ ಸಂಜೆಯ ವೇಳೆ ನಗರದಲ್ಲಿ ಭಾರೀ ಮಳೆಯಾಗಿದ್ದು, ಈ ಸಂದರ್ಭ ನಿಂತಿದ್ದ ಲಾರಿಯನ್ನು ಗಮನಿಸದ ಸ್ವಿಪ್ಟ್ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಇದರ ಹಿಂದಿನಿಂದ ಬರುತ್ತಿದ್ದ 3 ಕಾರು, ಪಿಕಪ್, ಬಸ್, ಒಂದಕ್ಕೊಂದು ಢಿಕ್ಕಿಯಾಗಿದೆ.
ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.