ಮಂಗಳೂರು(ಪುತ್ತೂರು): ಪುತ್ತೂರಿನ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಲ್ಲಿ ಬಂಧಿಸಿದ್ದಾರೆ.
ಕಡಬದ ನಿವಾಸಿ ಯಜ್ಞೇಶ್ ಪೋಕ್ಸೊ ಕಾಯ್ದೆಯಡಿ ಬಂಧಿತ ಆರೋಪಿಯಾಗಿದ್ದಾನೆ. ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್ ವೊಂದಕ್ಕೆ ಕರೆದೊಯ್ದು ಈ ಹೀನ ಕೃತ್ಯ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿದ ಹಿನ್ನಲೆಯಲ್ಲಿ ಆಕೆ ಕಲಿಯುತ್ತಿದ್ದ ಶಾಲೆಯ ಶಿಕ್ಷಕಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯು ಬೆಂಗಳೂರಿನಲ್ಲಿ ಇರುವುದನ್ನು ಖಚಿತ ಪಡಿಸಿದ ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಮಡಿಕೇರಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ ಲಾಡ್ಜ್ ನಲ್ಲಿ ಸ್ಥಳ ಮಹಜರು ನಡೆಸಿ ಕೋರ್ಟಿಗೆ ಹಾಜರು ಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.