ವರ್ಗಾವಣೆಗೆ ರೇಟ್ ಫಿಕ್ಸ್ – ಕಾಂಗ್ರೆಸ್ ಸರಕಾರದಲ್ಲಿ ಲಂಚಾವತಾರ- ಪಂಚರಾಜ್ಯ ಚುನಾವಣೆಗೆ ಅಕ್ರಮ ಹಣ ಬಳಕೆ – ಕಟೀಲ್‌ ಆರೋಪ‌. ಸಿ ಎಂ ಸಿದ್ದರಾಮಯ್ಯ ಕಲೆಕ್ಷನ್‌ ಮಾಸ್ಟರ್‌ ಎಂದ‌ ಶಾಸಕ ವೇದವ್ಯಾಸ್‌ ಕಾಮತ್

ಮಂಗಳೂರು: ರಾಜ್ಯದ ಕಾಂಗ್ರೆಸ್ ಕಾರ್ಪ ರೇಟರ್ ಮನೆಯಲ್ಲಿ ದೊರಕಿದ ಹಣ ಲಂಚಾವತಾರದ ಹಣವಾಗಿದೆ. ಗುತ್ತಿಗೆದಾರರ 600 ಕೋಟಿಯನ್ನು ಕಮೀಷನ್ ಆಧಾರದಲ್ಲಿ ಬಿಡುಗಡೆ ಮಾಡಿ ಆ ಹಣ ಐಟಿ ದಾಳಿಯಲ್ಲಿ ಸಿಕ್ಕಿದೆ ಇದಕ್ಕೆ ಪುರಾವೆಯೂ ಇದ್ದು ಕಾಂಗ್ರೆಸ್ ನಾಯಕರಿಗೆ ಮತ್ತೆ ತಿಹಾರ್ ಜೈಲ್ ಕೋಣೆ ಸಿದ್ದವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ ಮಂಗಳೂರು ಉತ್ತರ ಮಂಡಲದ ವತಿಯಿಂದ ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ದ ಕಾವೂರು ಜಂಕ್ಷನ್‍ನಲ್ಲಿ ಅ.17ರಂದು ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದೆ ನಮ್ಮ ಸರಕಾರಕ್ಕೆ ಪೇ ಸಿಎಂ, 40 ಪರ್ಸೆಂಟ್ ಸರಕಾರ ಎಂದು ಸುಳ್ಳು ಆರೋಪ ಮಾಡಿದರು. ಸಾಕ್ಷ್ಯ ನೀಡಿ ಎಂದರೆ ಅದೂ ಇರಲಿಲ್ಲ. 4 ತಿಂಗಳಲ್ಲಿ ಸಾಕ್ಷ್ಯ ಇಲ್ಲದೆ ಯಾವುದೇ ಮಂತ್ರಿಯನ್ನು ಜೈಲಿಗೆ ಕಳಿಸಲು ವಿಫಲರಾದರು. ಇದೀಗ ಕಾಂಗ್ರೆಸ್ ಸರಕಾರವೇ 80 ಪರ್ಸೆಂಟ್ ಸರಕಾರವಾಗಿದೆ. ಹಣ ಪಡೆದ ಬಗ್ಗೆ ಚೀಟಿಯೂ ಐಟಿ ಅಧಿಕಾರಿಗಳಿಗೆ ದೊರೆತಿದೆ. ಪಂಚ ರಾಜ್ಯ ಚುನಾವಣೆಗೆ ಕಳಿಸಲು ಇಟ್ಟ ಹಣವಾಗಿದೆ ಎಂಬುದು ಸ್ಪಷ್ಟ. ಕರ್ನಾಟಕ ಕಾಂಗ್ರೆಸ್ ಹೈಕಮಾಂಡ್‍ಗೆ ಎಟಿಎಂ ಆಗಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಬೇಕು. ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಈ ಮೂಲಕ ತಮ್ಮ ಸಾಚಾತನ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆಕ್ಷನ್‌ ಮಾಸ್ಟರ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಮಾತನಾಡಿ, ಕಲೆಕ್ಷನ್ ಮಾಸ್ಟರ್ ಸಿದ್ದರಾಮಯ್ಯ ಎಂದೇ ಬಿಜೆಪಿ ಮುಖ್ಯಮಂತ್ರಿಯನ್ನು ಕರೆಯುತ್ತದೆ. ಯಾವುದೇ ಕೇಸು ದಾಖಲಿಸಿದರೂ ಕಾನೂನು ಹೋರಾಟ ಮಾಡಲೂ ಸಿದ್ದರಿದ್ದೇವೆ. ಮಂಗಳೂರಿಗೆ ಲಂಚ ಕೊಟ್ಟು ಸ್ಥಾನಕ್ಕೆ ಬಂದ ಅಧಿಕಾರಿಯೊಬ್ಬರು ಕೋಟಿ ಕೊಟ್ಟು ಬಂದು ಜನರಿಂದ ಸುಲಿಗೆ ಮಾಡುವ ಮಾಹಿತಿ ಬರುತ್ತಿದೆ. ಖಜಾನೆಯಲ್ಲಿ ಹಣವಿಲ್ಲದ ಕಾರಣ ನಮಗೆ ಅನುದಾನ ಸಿಗುತ್ತಿಲ್ಲ. ಈ ಸರಕಾರದ ಅಭಿವೃದ್ದಿಯಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಲಿದೆ ಎಂದರು. ಬಿಜೆಪಿ ಮುಖಂಡರಾದ ಜಗದೀಶ್ ಶೇಣವ, ತಿಲಕ್ ರಾಜ್ ಕೃಷ್ಣಾಪುರ,ಕಸ್ತೂರಿ ಪಂಜ, ಪೂಜಾ ಪೈ,ರಣ್‍ದೀಪ್ ಕಾಂಚನ್,ಉಪಮೇಯರ್ ಸುನಿತಾ, ಬಿಜೆಪಿ ಮನಪಾ ಸದಸ್ಯರು, ಜಿಲ್ಲೆಯ ಪ್ರಮುಖರು,ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here