ಮಂಗಳೂರು(ಬೆಂಗಳೂರು): ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.
ಜೆಪಿ ಭವನದಲ್ಲಿಇಂದು ನಡೆದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಚ್‌ಡಿಡಿ ʼʼಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆʼʼ ಎಂದು ತಿಳಿಸಿದರು. ಪಕ್ಷದ ʼʼಅಡ್ ಹಾಕ್ʼʼ ಅಧ್ಯಕ್ಷರಾಗಿ ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಿ, ಪಕ್ಷದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ಪಕ್ಷದ ʼʼಅಡಹಾಕ್ʼʼ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟನೆ ತಿಳಿಸಿದೆ.