ಮಂಗಳೂರು(ಬೆಂಗಳೂರು): ಅ.28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ ನೀಡಿದೆ.
ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು ಕೆಇಎ ತಿಳಿಸಿದೆ. ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಫೋಟೋ, ಸರಕಾರ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.