ಮಂಗಳೂರು(ಪಡುಬಿದ್ರೆ): ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್, ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿ ಮನೆ ನಿವಾಸಿ ಶೃತಿನ್ ಶೆಟ್ಟಿ(35) ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಅ.16ರಂದು ಕಾರ್ಕಳಕ್ಕೆ ಕರ್ತವ್ಯಕ್ಕೆ ತೆರಳಿದ್ದ ಇವರು ಅ.19 ರಂದು ಫೋನ್ ಮಾಡಿ ತಾನು ನಂದಿಕೂರಿನಲ್ಲಿ ಇದ್ದು ಮನೆಗೆ ಬರುವುದಾಗಿ ಪತ್ನಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಪೂಜಾ ಶೆಟ್ಟಿ ಪಡುಬಿದ್ರೆ ಪೊಲೀಸ್ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.