ನಾಳೆ ವಿಶ್ವವಿಖ್ಯಾತ ಮೈಸೂರು ಜಂಬೂ ಸವಾರಿ

ಮಂಗಳೂರು (ಮೈಸೂರು): ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಯುಧಪೂಜೆ ನೆರವೇರಿಸಿದರು. ನಾಳೆ ಮಂಗಳವಾರ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಒಂಬತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ ಬೀಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4.40ಕ್ಕೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡವ ಮೂಲಕ ಜಂಬೂ ಸವಾರಿ ವಿದ್ಯುಕ್ತವಾಗಿ ಆರಂಭಗೊಳ್ಳಲಿದೆ. ಬಳಿಕ, ಮೆರವಣಿಗೆ 5 ಕಿ.ಮೀ. ಸಾಗಿ ಬನ್ನಿಮಂಟಪ ತಲುಪಲಿದೆ. ಅಲ್ಲಿ ಸಂಜೆ 7.30ಕ್ಕೆ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಗೌರವ ವಂದನೆ ಸ್ವೀಕರಿಸುವರು. ಸಿಎಂ ಸೇರಿದಂತೆ ಸಂಪುಟದ ಹಲವು ಸದಸ್ಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರೊಂದಿಗೆ ಈ ಬಾರಿಯ ನಾಡಹಬ್ಬ ಮೈಸೂರು ದಸರೆಗೆ ತೆರೆ ಬೀಳಲಿದೆ.

LEAVE A REPLY

Please enter your comment!
Please enter your name here