ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ – ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಹಿಂದಿನಿಂದ ಡಿಕ್ಕಿಯಾದ ಟಾಟಾ ಸುಮೋ – ಮಗು ಸೇರಿ 13 ಜನ ಮೃತ್ಯು

ಮಂಗಳೂರು(ಚಿಕ್ಕಬಳ್ಳಾಪುರ): ಸಿಮೆಂಟ್ ಬಲ್ಕರ್ ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಪಂಚರ್ ಆಗಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ, ಟಾಟಾ ಸುಮೋ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬೆಳಿಗ್ಗೆ ಸುಮಾರು 7 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು, ಒಂದು ಗಂಡು ಮಗು, ಎಂಟು ಮಂದಿ ಪುರುಷರು ಸೇರಿದಂತೆ ಒಟ್ಟು 13ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಆಂದ್ರದ ಅನಂತಪುರ ಜಿಲ್ಲೆಯ ಗೋರಂಟ್ಲ ವ್ಯಾಪ್ತಿಗೆ ಸೇರಿದ ಕೊತ್ತಚೆರುವುನವರಾಗಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here