ಹುಲಿ ಉಗುರು – ಬೆದರಿದ ಖ್ಯಾತನಾಮರು – ಹೈಕೋರ್ಟ್ ಮೆಟ್ಟಿಲೇರಿದ ರಾಜ್ಯಸಭಾ ಸದಸ್ಯ ಜಗ್ಗೇಶ್

ಮಂಗಳೂರು(ಬೆಂಗಳೂರು): ಹುಲಿ ಉಗುರು ಧರಿಸಿದವರ ವಿರುದ್ಧ, ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದು, ನಟ ದರ್ಶನ್, ನಿಖಿಲ್ ಕುಮಾರ್, ಜಗ್ಗೇಶ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿ ಅವರ ನಿವಾಸಕ್ಕೂ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ ನಟ ಜಗ್ಗೇಶ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.

ಅರಣ್ಯಾಧಿಕಾರಿಗಳ ದಾಳಿ ಕಾನೂನು ಬಾಹಿರವಾಗಿದ್ದು, ಕ್ರಮ ಸರಿ ಇಲ್ಲ ಎಂದು ಹೈಕೋರ್ಟ್ ಗೆ ಜಗ್ಗೇಶ್ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಅರಣ್ಯಾಧಿಕಾರಿಗಳ ನಡೆ ಕಾನೂನು ಬಾಹಿರ ಎಂದು ಘೋಷಿಸಲು ಮನವಿ ಮಾಡಿಕೊಂಡಿದ್ದು, ಜೊತೆಗೆ ಅರಣ್ಯಾಧಿಕಾರಿಗಳು ಕೊಟ್ಟಿರುವ ನೋಟೀಸ್ ಅನ್ನು ರದ್ದು ಪಡಿಸಲು‌ ನಟ ಜಗ್ಗೇಶ್ ಮನವಿ ಸಲ್ಲಿಸಿದ್ದಾರೆ.

 

 

LEAVE A REPLY

Please enter your comment!
Please enter your name here