ಮಂಗಳೂರು(ನವದೆಹಲಿ): ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಮಂತ್ರಣ ನೀಡಿದೆ.
ಈ ಬಗ್ಗೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್, ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ ಟ್ರಸ್ಟ್ ನ ನಿಯೋಗದಲ್ಲಿ ರಾಜ್ಯದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಭಾಗಿಯಾಗಿದ್ದರು.