ಸುಳ್ಯ ಮೂಲದ ಮಹಿಳೆ ಬೆಂಗಳೂರಿನಲ್ಲಿ ಆತ್ಮಹತ್ಯೆ-ಉಬರಡ್ಕದ ಮದುವೆಗದ್ದೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ದತೆ

ಮಂಗಳೂರು(ಬೆಂಗಳೂರು): ಸುಳ್ಯ ಮೂಲದ ಮಹಿಳೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೈರಿ ರಿಚ್ ಐಸ್ ಕ್ರೀಂ ಉದ್ಯಮಿ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರ ಪತ್ನಿ ಐಶ್ವರ್ಯ(26) ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿ ಐಶ್ವರ್ಯ ಅವರನ್ನು ನಾಲ್ಕು ವರ್ಷಗಳ ಹಿಂದೆ ರಾಜೇಶ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ಐಶ್ವರ್ಯ ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ಪತಿ ರಾಜೇಶ್ ಸ್ವಂತ ಐಸ್ ಕ್ರೀಮ್ ಪಾರ್ಲರ್ ನಡೆಸಿಕೊಂಡಿದ್ದರು. ಇಬ್ಬರು ಬೆಂಗಳೂರಿನಲ್ಲೇ ವಾಸವಾಗಿದ್ದರು. ಐಶ್ವರ್ಯಳ ತಂದೆ, ತಾಯಿ ಕೂಡ ಬೆಂಗಳೂರಿನಲ್ಲೇ ನೆಲೆಸಿದ್ದು, ಕೆಲವು ದಿನಗಳ ಹಿಂದೆ ಐಶ್ವರ್ಯ ತಾಯಿ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಐಶ್ವರ್ಯ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಐಶ್ವರ್ಯ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಮಿತ್ತೂರು ಗ್ರಾಮದ ಉಬರಡ್ಕದ ಮದುವೆಗದ್ದೆಯಲ್ಲಿರುವ ತಂದೆ ಮನೆಗೆ ತರಲಾಗುತ್ತಿದ್ದು, ಅಲ್ಲಿ ಅಂತಿಮಸಂಸ್ಕಾರ ನಡೆಯಲಿದೆ. ಸಂಜೆ 6 ಗಂಟೆ ವೇಳೆಗೆ ಪಾರ್ಥೀವ ಶರೀರ ಸುಳ್ಯಕ್ಕೆ ತಲುಪಲಿದೆ ಎನ್ನಲಾಗಿದೆ.

 

LEAVE A REPLY

Please enter your comment!
Please enter your name here