ಮಂಗಳೂರು(ಬೆಳಗಾವಿ): ಯೋಧನೋರ್ವನ ಮೇಲೆ ಕಿಡಿಗೇಡಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮೂರು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪರುಶುರಾಮ್ ಪಾಟೀಲ್ ಹಲ್ಲೆಗೊಳಗಾದ ಯೋಧ.
ನಗರದ ಬಾರ್ ಒಂದರ ಎದುರು ನಡು ರಸ್ತೆಯಲ್ಲೇ ಯೋಧನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು ಅಲ್ಲಿಂದ ಪರಾರಿಯಾಗಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಯೋಧ ಪರುಶುರಾಮ್ ಜಮ್ಮುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಟಿವಿ ಮಾಧ್ಯಮವೊಂದು ವರದಿ ಮಾಡಿದೆ. ಯೋಧ ಪರಶುರಾಮ್ ಮದ್ಯ ಸೇವಿಸಿದ್ದು, ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ, ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು ಎಂದು ಆರೋಪಿಸಿ ದುಷ್ಕರ್ಮಿಗಳ ಗುಂಪು ಯೋಧನನ್ನು ಥಳಿಸಿದೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರು ಜನರ ವಿರುದ್ಧ ಇಲ್ಲಿನ ಕ್ಯಾಂಪ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಲಾಗಿದೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
On Camera: Drunk soldier beaten up outside a bar for creating traffic menace and abusing people on the road in Karanataka.
Read here: https://t.co/0se6HjR77u pic.twitter.com/u4sjGQO7P5
— NDTV (@ndtv) November 6, 2023