ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಆತ್ಮಹತ್ಯೆ ಶಂಕೆ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಕರ್ಣಾಟಕ ಬ್ಯಾಂಕ್ ನ ಜನರಲ್ ಮ್ಯಾನೇಜರ್ ವಾದಿರಾಜ್ ಕೆ (51ವ) ಅವರ ದೇಹ ನಗರದ ಹೊರವಲಯದ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳಿಗ್ಗೆ ಕಚೇರಿಗೆ ಕರೆದೊಯ್ಯಲು ಡ್ರೈವರ್ ಮನೆಗೆ ಬಂದಾಗ ವಾದಿರಾಜ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗಂಭೀರ ಸ್ಥಿತಿಯಲ್ಲಿದ್ದ ವಾದಿರಾಜ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕರ್ಣಾಟಕ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ನಾದಿರಾಜ್ ಪತ್ನಿ ಮಕ್ಕಳೊಂದಿಗೆ ಕಳೆದ ಒಂದು ವರ್ಷದಿಂದ ಅಪಾರ್ಟ್ಮೆಂಟ್ ನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮಾ ಅಗರ್ ವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪತ್ನಿ ಮಕ್ಕಳು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here