ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ – ಓರ್ವನಿಗೆ ಗಾಯ

ಮಂಗಳೂರು(ಉಡುಪಿ): ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹತ್ಯೆಗೀಡಾದವರನ್ನು ಹಸೀನಾ(46) ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಅಸೀಮ್(14) ಎಂದು ಗುರುತಿಸಲಾಗಿದೆ. ಅಪರಿಚಿತ ಬೋಳು ತಲೆಯ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್ಪಿ ಆಗಮಿಸಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here