ಮಂಗಳೂರು(ಬೆಂಗಳೂರು): ನ.12ರ ರವಿವಾರ ತಡ ರಾತ್ರಿ 12 ಘಂಟೆಗೆ ಬೆಂಗಳೂರು ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿರುವ ನಾಲ್ಕು ಅಂತಸ್ತಿನ ಬಿಲ್ಡಿಂಗ್ ಧಗ-ಧಗನೇ ಹೊತ್ತಿ ಉರಿದಿದೆ. ನೆಲ ಹಾಗೂ ಮೊದಲ ಮಹಡಿಯಲ್ಲಿ ಸ್ಟ್ಯಾನ್ಲಿ ಫರ್ನಿಚರ್ಸ್, ಎರಡನೇ ಮಹಡಿಯಲ್ಲಿರುವ ಕಾಮೆಡ್ ಕೋಂಚಿಂಗ್ ಸೆಂಟರ್, 3 ಮತ್ತು 4ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್, ಸಾಫ್ಟ್‌ವೇರ್ ಕಂಪನಿ ಸೇರಿದಂತೆ ಇಡೀ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳನ್ನು ಅಗ್ನಿಶಾಮಕದಳ ಸಿಬ್ಬಂದಿಗಳು ರಕ್ಷಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಮತ್ತೊಂದೆಡೆ ನರಕ ಚತುರ್ದಶಿ ದಿನವಾದ ನ.12ರಂದು ನಗರದ ವಿವಿಧೆಡೆ ಪಟಾಕಿ ಅವಘಡಗಳು ಸಂಭವಿಸಿದ್ದು, ನಾರಾಯಣ ನೇತ್ರಾಲಯದಲ್ಲಿ 16 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಹೆಚ್ಚಿನವರು ಪಟಾಕಿ ಹಚ್ಚದಿದ್ದರೂ, ವೀಕ್ಷಿಸುವ ವೇಳೆ ಗಾಯಗೊಂಡಿದ್ದಾರೆ.