ಮಂಗಳೂರು(ಬೆಂಗಳೂರು): ಬೆಳಗಾವಿ ಸುವರ್ಣಸೌಧದಲ್ಲಿ ಡಿ.4ರಿಂದ 15ರ ವರೆಗೆ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಡಿ.4ರ ಬೆಳಗ್ಗೆ 11ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಶನಿವಾರ ಮತ್ತು ರವಿವಾರ ಹೊರತುಪಡಿಸಿ ಒಟ್ಟು 10 ದಿನಗಳ ಕಾಲ ಅಧಿವೇಶನ ಕಲಾಪ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ಜರುಗಲಿದೆ ಎಂದು ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.