ಮಂಗಳೂರು: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ‘ಏರ್ ಇಂಡಿಯಾ ಎಕ್ಸ್ಪ್ರೆಸ್’ ವಿಮಾನಯಾನ ಸಂಸ್ಥೆ ಉದ್ಯೋಗದಿಂದ ಅಮಾನತುಗೊಳಿಸಿದೆ.
ಈ ಘಟನೆಯಿಂದ ನಮಗೆ ತೀವ್ರ ದುಃಖವಾಗಿದ್ದು, ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡಿ, ತನಿಖೆಗೆ ಎಲ್ಲಾ ಸಹಕಾರ ನೀಡುತ್ತೇವೆ. ಈ ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಆತನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಯಾನ ಸಂಸ್ಥೆಯ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.