



ಮಂಗಳೂರು(ಚೆನ್ನೈ): ತಮಿಳುನಾಡಿನ ಹಿರಿಯ ನಟ ಹಾಗೂ ರಾಜಕಾರಣಿ ವಿಜಯ್ ಕಾಂತ್ 3 ದಿನಗಳ ಹಿಂದೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದು, ದಿನೇ-ದಿನೇ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ವರದಿಯಾಗಿದೆ.







ಅವರಿಗೆ 71 ವರ್ಷ ವಯಸ್ಸಾಗಿದೆ. ಇತ್ತೀಚೆಗೆ ಕೆಮ್ಮು ಹಾಗೂ ಜ್ವರದಿಂದ ಬಳಲಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗಿನಿಂದಲೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ ಎನ್ನಲಾಗುತ್ತಿದೆ. ಅವರ ಅಭಿಮಾನಿಗಳು, ಬೆಂಬಲಿಗರು ವಿಜಯ್ ಕಾಂತ್ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಆಸ್ಪತ್ರೆ ನೀಡಿರುವ ಮಾಹಿತಿಯಂತೆ ವಿಜಯ್ ಕಾಂತ್ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಮ್ಮು ನಿಯಂತ್ರಣಕ್ಕೆ ಬರುತ್ತಿಲ್ಲ, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಅವರನ್ನು ಕಾಡುತ್ತಿದೆ ಎನ್ನಲಾಗಿದೆ.















