ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯೆಲ್ ನೇಮಕ-ಡಿ.1ರಂದು ಅಧಿಕಾರ ಸ್ವೀಕಾರ

ಮಂಗಳೂರು(ಬೆಂಗಳೂರು): ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

1986ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಹರ್ಯಾಣ ಮೂಲದ ರಜನೀಶ್ ಗೋಯೆಲ್ ಅವರು ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ರಾಜ್ಯದ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ವಂದಿತಾ ಶರ್ಮಾ ಅವರು ನ.30ಕ್ಕೆ ನಿವೃತ್ತರಾಗಲಿದ್ದು ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕದ 40ನೇ ಮುಖ್ಯ ಕಾರ್ಯದರ್ಶಿಯಾಗಿ ಅವರು ದ.ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2024ರ ಜುಲೈನಲ್ಲಿ ಇವರು ನಿವೃತ್ತಿ ಹೊಂದಲಿದ್ದಾರೆ.ಡಾ|ರಜನೀಶ್ ಗೋಯೆಲ್ ಇವರ ಪತ್ನಿ ಶಾಲಿನಿ ರಜನೀಶ್ ಕೂಡ ಐಎಎಸ್ ಅಧಿಕಾರಿಯಾಗಿದ್ದು ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

 

LEAVE A REPLY

Please enter your comment!
Please enter your name here