ಮಂಗಳೂರು(ಕೊಲ್ಲಂ): ಸುಪ್ರೀಂ ಕೋರ್ಟಿನ ಪ್ರಥಮ ಮಹಿಳಾ ನ್ಯಾಯಾಧೀಶೆ ಮತ್ತು ತಮಿಳುನಾಡಿನ ಮಾಜಿ ರಾಜ್ಯಪಾಲೆ ನ್ಯಾಯಮೂರ್ತಿ ಫಾತಿಮಾ ಬೀವಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನ.23ರಂದು ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.
ಸುಪ್ರೀಂ ಕೋರ್ಟಿನ ಪ್ರಥಮ ಮಹಿಳಾ ನ್ಯಾಯಾಧೀಶೆಯಾಗಿದ್ದ ಫಾತಿಮಾ ಬೀವಿ ಧೀರ ಮಹಿಳೆಯಾಗಿದ್ದರು. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ನ್ಯಾಯಮೂರ್ತಿ ಫಾತಿಮಾ ಬೀವಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.