ಮಂಗಳೂರು(ಹರಿಯಾಣ): 142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹರಿಯಾಣದ ಜಿಂದ್ ನ ಸರಕಾರಿ ಶಾಲೆಯ ಮುಖ್ಯೋಪಾದ್ಯಾಯರನ್ನು ಪೊಲೀಸರು ಬಂಧಿಸಿದ್ದಾರೆ.
ಹರಿಯಾಣದ ಜಿಂದ್ ನ ಸರಕಾರಿ ಶಾಲೆಯಲ್ಲಿ 6 ವರ್ಷದ ಅವಧಿಯಲ್ಲಿ 142 ಹೆಣ್ಣುಮಕ್ಕಳಿಗೆ ಲೈಂಗಿಕ ದೌರ್ಜನ್ಯ ಮಾಡಿರುವುದಾಗಿ ಆರೋಪಿಸಲಾಗಿದೆ. 390 ವಿದ್ಯಾರ್ಥಿನಿಯರಿರುವ ಈ ಶಾಲೆಯಲ್ಲಿ 142 ವಿದ್ಯಾರ್ಥಿನಿಯರು ಪ್ರಿನ್ಸಿಪಾಲ್ ರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಕಳೆದ ಆ.31ರಂದು ಶಾಲೆಯ ಸುಮಾರು 15 ವಿದ್ಯಾರ್ಥಿನಿಯರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಮಹಿಳಾ ಆಯೋಗಕ್ಕೆ ಪತ್ರ ಬರೆದು ವಿದ್ಯಾರ್ಥಿನಿಯರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ಸಲ್ಲಿಸಿದ್ದರು. ಈ ದೂರಿನ ಹಿನ್ನಲೆಯಲ್ಲಿ ಶಾಲೆಯ ಪ್ರಿನ್ಸಿಪಾಲರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ.