ಮಂಗಳೂರು: ಅತ್ತಾವರದ ಫ್ಲ್ಯಾಟೊಂದರಲ್ಲಿ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸಹೈನ್ ಮುಸಾಬ್ (57) ಮೃತಪಟ್ಟ ಮಹಿಳೆ.ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇತರರು ಹೊರ ಬಂದಿದ್ದರು. ಆದರೆ ಮುಸಾಬ್ ಶೌಚಾಲಯದೊಳಗಿದ್ದ ಕಾರಣ ಹೊರಬರಲಾಗದೇ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮನೆಯೊಳಗಿದ್ದ ಪೀಠೋಪಕರಣಗಳು ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ.