ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣ- ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು (ಬೆಂಗಳೂರು): ವರ್ಷದ ಹಿಂದೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋ ಟ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ರಾಷ್ಟ್ರೀಯ ತನಿಖಾ ದಳ ಇದೊಂದು ಇಸ್ಲಾಮಿಕ್ ಸ್ಟೇಟ್  ಪ್ರಾಯೋಜಿತ ಕೃತ್ಯ. ಅದಕ್ಕೆ ಶಂಕಿತ ಉಗ್ರರಾದ ಮೊಹಮ್ಮದ್ ಶಾರೀಕ್ ಮತ್ತು ಸೈಯದ್ ಶಾರೀಕ ನ್ನು ಸಂಘಟನೆ ಬಳಸಿಕೊಂಡಿದೆ ಎಂದು ನ.29ರಂದು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇ ಖಿಸಿದೆ.


ಇಸ್ಲಾಮಿಕ್ ಸ್ಟೇಟ್ ಗೆ ಸಂಬಂಧಿಸಿದಂತೆ ಪ್ರೆಶರ್ ಕುಕ್ಕರ್ ಐಇಡಿ ಸಿದ್ಧಪಡಿಸಿದ ಮೊಹಮ್ಮದ್ ಶಾರಿಕ್ ಮತ್ತು ಸ್ಫೋಟಕ ವಸ್ತುಗಳನ್ನು ಪೂರೈಸಿದ ಸೈಯದ್ ಶಾರಿಕ್ ಎಂಬ ಇಬ್ಬರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ. 2022ರ ನ.19ರಂದು ಮಂಗಳೂರಿನಲ್ಲಿ ಪ್ರಾಯೋಜಿತ ಪ್ರೆಶರ್ ಕುಕ್ಕರ್ ಸ್ಫೋಟ ಮಾಡಿತ್ತು. ನ.29ರಂದು ನ್ಯಾಯಾಲಯದ ಮುಂದೆ ಇಬ್ಬರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ಎನ್‌ಐಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಾರಿಕ್ ಮತ್ತು ಸೈಯದ್, ಆನ್‌ಲೈನ್ ಹ್ಯಾಂಡ್ಲರ್‌ನೊಂದಿಗೆ ಸೇರಿ ಕ್ಯಾಲಿಫೇಟ್ ಸ್ಥಾಪನೆಯ ಪಿತೂರಿಯ ಭಾಗವಾಗಿ ಸ್ಫೋಟವನ್ನು ಯೋಜಿಸಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಮೊಹಮ್ಮದ್ ಶಾರಿಕ್ ಕಳೆದ ವರ್ಷ ನವೆಂಬರ್ 19 ರಂದು ಆಟೊ ರಿಕ್ಷಾದಲ್ಲಿ ಪ್ರೆಶರ್ ಕುಕ್ಕರ್ ಐಇಡಿಯನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಅದು ಸ್ಫೋಟಗೊಂಡಿತ್ತು. ಹಿಂದೂ ಸಮುದಾಯದಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದಲ್ಲಿ ಐಇಡಿ ಅಳವಡಿಸಲು ಯೋಜಿಸಿದ್ದರು. ಆದರೆ ಮಾರ್ಗಮಧ್ಯೆ ಲೋ ಇಂಟೆನ್ಸಿಫೈಡ್ ಬಾಂಬ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದಕ್ಕೂ ಮೊದಲು ಶಂಕಿತರ ವಿರುದ್ಧ ಮಂಗಳೂರಿನಲ್ಲಿ ಉಗ್ರರ ಕೃತ್ಯಕ್ಕೆ ಸಂಬಂಧಿಸಿದ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಇಸ್ಲಾಮಿಕ್ ಸ್ಟೇ ಟ್ ಬೆಂಬಲಿಸಲು ಗೋಡೆಬರಹ ಬರೆದಿದ್ದರು. ಜತೆಗೆ ಶಿವಮೊಗ್ಗದ ತುಂಗಾ ತೀರದಲ್ಲಿ ಸ್ಫೋಟ ಪ್ರಯೋಗ ನಡೆದಿತ್ತು. ಈ ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಿದ್ದು, ಸೈಯದ್ ಹಾಗೂ ಶಾರೀಕ್ ಪಾತ್ರದ ಬಗ್ಗೆ ಜುಲೈನಲ್ಲಿ ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಎನ್ಐಎ ತಿಳಿಸಿದೆ.

LEAVE A REPLY

Please enter your comment!
Please enter your name here