ಮಂಗಳೂರು (ಬೆಂಗಳೂರು): 2023-24ನೇ ಸಾಲಿನ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಡಿ. 01ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ರಾಜ್ಯದ ‘ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ”ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ. ಮಂಡಳಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿ.01 ರಿಂದ 15ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ.