ಗುರು ರಾಘವೇಂದ್ರ ಕೋ ಅಪರೇಟಿವ್ ಬ್ಯಾಂಕ್ ಸೇರಿದಂತೆ ಮೂರು ಸಹಕಾರಿ ಬ್ಯಾಂಕ್ ಹಗರಣ – ಸಿಬಿಐ ತನಿಖೆಗೆ ನೀಡಿದ ರಾಜ್ಯ ಸರಕಾರ

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನು ಸಿಬಿಐ ತನಿಖೆಗೆ ನೀಡಲು ಅನುಮೋದನೆ ನೀಡಿದ್ದಾರೆ.

ಈ ಬ್ಯಾಂಕ್ ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು. ಮೂರೂ ಬ್ಯಾಂಕ್ ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಬೆಂಬಲ ಸೂಚಿಸಿದ್ದರು.

LEAVE A REPLY

Please enter your comment!
Please enter your name here