ಮಂಗಳೂರು(ವಿಜಯಪುರ): ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಡಿ.4ರಂದು ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇದರಲ್ಲಿ ಬಿಹಾರ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ರಾಜೇಶ್ ಮುಖಿಯಾ (25), ರಾಮಬ್ರೀಜ್ ಮುಖಿಯಾ (29), ಶಂಭು ಮುಖಿಯಾ (26), ಕೃಷ್ಣಾ ಮುಖಿಯಾ (18) ಸೇರಿ ಒಟ್ಟು ಆರು ಕಾರ್ಮಿಕರ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಫುಡ್ ಪ್ರೊಸೆಸಿಂಗ್ ಯುನಿಟ್ನಲ್ಲಿ ಕೆಲಸ ಮಾಡುತ್ತಿದ್ದಾಗ ಮೆಕ್ಕೆಜೋಳದ ಚೀಲಗಳು ಸುಮಾರು 11 ಕಾರ್ಮಿಕರ ಮೇಲೆ ಕುಸಿದಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಚಿವ ಎಂಬಿ ಪಾಟೀಲ್ ಭೇಟಿ ನೀಡಿದ್ದಾರೆ.