ಮಂಗಳೂರು(ಸುಬ್ರಹ್ಮಣ್ಯ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.09ರಂದು ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ.
ಶ್ರೀ ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ, ಡಿ.9ರ ಶನಿವಾರ ‘ಮೂಲಮೃತಿಕಾ ” ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ, ಭಕ್ತಾದಿಗಳಿಗೆ ಬೆಳೆಗ್ಗಿನಿಂದ ಅಪರಾಹ್ನ 2.00 ರ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆಗೆ ಅವಕಾಶವಿರುವುದಿಲ್ಲ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನಿರ್ವಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.