ಮಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಭೆಯಲ್ಲಿ ಐ ಎಸ್ ಐ ಏಜೆಂಟ್ ಇದ್ದರು ಎಂಬ ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸಿಟಿ ರವಿ ಆ ಕಾರ್ಯಕ್ರಮದಲ್ಲಿ ಯಾರ್ಯಾರು ಇದ್ದರು ಅವರ ಹಿನ್ನಲೆ ಏನು ಅನ್ನೋದರ ಬಗ್ಗೆ ಗಂಭೀರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಅಂಬೇಡ್ಕರ್ ಸ್ಮರಣ ಮಹಾಪರಿನಿರ್ವಾಣ ಸಭೆಯಲ್ಲಿ ಹೇಳಿಕೆ ನೀಡಿದ ಅವರು ಯತ್ನಾಳ್ ಸುಮ್ಮನೆ ಆರೋಪ ಮಾಡಿದ್ದಾರೆ ಎಂದು ಅನಿಸುವುದಿಲ್ಲ. ಈ ವಿಷಯದ ಬಗ್ಗೆ ಸಿಬಿಐ ಅಥವಾ ಎನ್ ಐ ಎ ಯಿಂದ ತನಿಖೆ ನಡೆಸುವ ಅವಶ್ಯಕತೆಯಿದೆ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಅಪಾಯಕಾರಿ ಹೇಳಿಕೆ. ಇದು ಕೋಮುವಾದ ನೀತಿಗೆ ನಿದರ್ಶನ. ಈ ಮಾನಸಿಕತೆಯಿಂದಲೇ ದೇಶ ವಿಭಜನೆಗೆ ಕಾರಣವಾಗಿದ್ದು, ಮುಖ್ಯಮಂತ್ರಿಗಳು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ಗಾಗಿ ಇಂತಹ ಅಪಾಯಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.
ಈ ದೇಶದ ಸಂಪತ್ತು ಭಾರತೀಯರಿಗೆ, ಭಾರತೀಯತೆಯನ್ನು ಒಪ್ಪಿದವರಿಗೆ ಸೇರಿದ್ದು. ಭಾರತದಲ್ಲೇ ಇದ್ದು ಭಾರತ ದೇಶಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ. ದೇಶದ ಸಂಪತ್ತಿನ ಮೊದಲ ಹಂಚಿಕೆ ಬಡವರಿಗೆ ಆಗಬೇಕು ಅದು ನಮ್ಮ ನೀತಿ. ಈ ಓಲೈಕೆಯ ರಾಜನೀತಿಯ ಪರಿಣಾಮ ಕೋಟ್ಯಂತರ ಜನ ನಿರ್ವಸತಿಯಾಗೋದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಇಸ್ ರಿಯಲ್ ಕಮ್ಯುನಲ್ ಪಾರ್ಟಿ ಎಂದು ಸಿ ಟಿ ರವಿ ಹೇಳಿದ್ದಾರೆ