ಮಂಗಳೂರು(ನವದೆಹಲಿ): ಕೆಲ ದಿನಗಳ ಹಿಂದೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ, ಅದರಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾದ 10 ಮಂದಿ ಬಿಜೆಪಿ ಸಂಸದರು ಡಿ.6ರಂದು ತಮ್ಮ ಸಂಸತ್ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದು, ಶಾಸಕರಾಗಿ ಮುಂದುವರೆಯಲಿದ್ದಾರೆ. ಮಧ್ಯಪ್ರದೇಶದಿಂದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಸ್ಥಾನದಿಂದ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಛತ್ತೀಸ್ಗಢದಿಂದ ಅರುಣ್ ಸಾವೊ ಮತ್ತು ಗೋಮತಿ ಸಾಯಿ ರಾಜೀನಾಮೆ ನೀಡಿದ್ದಾರೆ. ಬಾಬಾ ಬಾಲಕನಾಥ್ ಮತ್ತು ರೇಣುಕಾ ಸಿಂಗ್ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ. ಇವರಿಬ್ಬರು ಶೀಘ್ರದಲ್ಲೇ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.