ಟ್ರಕ್ ಗೆ ಡಿಕ್ಕಿ ಹೊಡೆದ ಕಾರು – ಮಗು ಸೇರಿದಂತೆ 8 ಮಂದಿ ಸಜೀವ ದಹನ

ಮಂಗಳೂರು(ಉತ್ತರ ಪ್ರದೇಶ): ಕಾರೊಂದು ಟ್ರಕ್‍ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು ಮಂದಿ ಸಜೀವ ದಹನಗೊಂಡ ಘಟನೆ ಉತ್ತರ ಪ್ರದೇಶದ ಬರೇಲಿಯ ನೈನಿತಾಲ್ ಹೆದ್ದಾರಿಯಲ್ಲಿ ನಡೆದಿದೆ.

ಕಾರು ಸೆಂಟರ್ ಲಾಕ್ ಆಗಿದ್ದ ಕಾರಣ ಏಳು ವಯಸ್ಕರು ಮತ್ತು ಮಗು ಸಿಕ್ಕಿಹಾಕಿಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಭೋಜಿಪುರದ ಬಳಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು, ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡು ಒಳಗಿದ್ದವರು ಸಾವನ್ನಪ್ಪಿದ್ದಾರೆ. ಕಾರು ಸೆಂಟ್ರಲ್ ಲಾಕ್ ಆದ ಪರಿಣಾಮ ಅವರಿಗೆ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಪಘಾತದಲ್ಲಿ ಮೃತಪಟ್ಟವರು ಸಂಬಂಧಿಕರ ಮದುವೆಯಲ್ಲಿ ಭಾಗವಹಿಸಿ ಬರುವ ವೇಳೆ ಕಾರು ಎದುರಿನ ಲೇನ್‌ಗೆ ತಿರುಗಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಚಂದ್ರ ಭನ್ ಧುಲೆ ತಿಳಿಸಿದ್ದಾರೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಟ್ರಕ್‍ಗೆ ಕಾರು ಡಿಕ್ಕಿಯಾದ ಬಳಿಕ ಬೆಂಕಿ ಹೊತ್ತಿಕೊಂಡಿದೆ.

LEAVE A REPLY

Please enter your comment!
Please enter your name here