ವಿಪಕ್ಷಗಳ ಧರಣಿ, ಗದ್ದಲದ ನಡುವೆ ಐದು ವಿಧೇಯಕಗಳಿಗೆ ಅಂಗೀಕಾರ

ಮಂಗಳೂರು(ಬೆಳಗಾವಿ): ‘ಸ್ಪೀಕರ್ ಸ್ಥಾನಕ್ಕೆ ಅಗೌರವ’ ತೋರಿರುವ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಡಿ.11ರ ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ, ಗದ್ದಲ ನಡೆಸುತ್ತಿದ್ದ ಮಧ್ಯೆಯೆ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ ಸೇರಿದಂತೆ ಐದು ಮಹತ್ವದ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ-ಎರಡನೇ ತಿದ್ದುಪಡಿ ವಿಧೇಯಕ, ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ-ತಿದ್ದುಪಡಿ ವಿಧೇಯಕ, ಕರ್ನಾಟಕ ಸ್ಟಾಂಪು-ತಿದ್ದುಪಡಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-ತಿದ್ದುಪಡಿ ವಿಧೇಯಕ ಹಾಗೂ ಕರಾವಳಿ ಅಭಿವೃದ್ಧಿ ಮಂಡಲಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿದೆ.

LEAVE A REPLY

Please enter your comment!
Please enter your name here