ಮಂಗಳೂರು(ಬೆಂಗಳೂರು): ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದನದಲ್ಲಿ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೈಕಲ್ ಹಿಂದಿನ ಸರ್ಕಾರ ಕೊಡೋದು ನಿಲ್ಲಿಸಿದೆ. ನಾನು ಈಗಾಗಲೇ ಸಿಎಂ ಜೊತೆಗೆ ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.