ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್‌ ನನ್ನು ಬಂಧಿಸಿದ ಎನ್​ಐಎ ಅಧಿಕಾರಿಗಳು

ಮಂಗಳೂರು(ಬೆಂಗಳೂರು): ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ ಪೇಟಿವಾಲನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ವಾರ ಬೆಂಗಳೂರಿನಲ್ಲಿ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆತನನ್ನು ಕಳುಹಿಸಿದ್ದು ಮತ್ತೆ ಅಬ್ಬಾಸ್​ನನ್ನು ಬಂಧಿಸಲಾಗಿದೆ.

ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ವಾಸವಾಗಿದ್ದ ಅಬ್ಬಾಸ್ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ತೀವ್ರ ಶೋಧ ನಡೆಸಿದ್ದರು. ಬಳಿಕ ಮರುದಿನ ಮತ್ತೆ ಅಬ್ಬಾಸ್ ಮನೆಯ ಮೇಲೆ ದಾಳಿ ಮಾಡಿ ಪರಿಶೀಲಿಸಿ 16,42,000 ಹಣ ಸೀಜ್ ಮಾಡಿದ್ದರು. ಮೊಬೈಲ್, ಲ್ಯಾಪ್ಟಾಪ್ ಪರಿಶೀಲನೆ ನಡೆಸಿ ಐಸಿಸ್ ಶಂಕಿತ ಉಗ್ರ ಅಬ್ಬಾಸ್ ನನ್ನ ವಶಕ್ಕೆ ಪಡೆದಿದ್ದರು. ಬಳಿಕ ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದರು. ನಂತರ ದಾಖಲೆಗಳ ಪರಿಶೀಲನೆ ನಡೆಸಿ ಮತ್ತೆ ಅರೆಸ್ಟ್ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಐಸಿಸ್ ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತರನ್ನ ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು.

 

LEAVE A REPLY

Please enter your comment!
Please enter your name here