ಮಂಗಳೂರು(ಹೊಸದಿಲ್ಲಿ): ಸಂಸತ್ ಭವನದಲ್ಲಿ ಭಾರೀ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ನಾಲ್ವರು ಆರೋಪಿಗಳ ವಿರುದ್ಧ ಭಯೋತ್ಪಾದನೆಯ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳಾದ ವಿಕಾಸ್ ಶರ್ಮಾ, ಮನೋರಂಜನ್ ಡಿ., ನೀಲಂ ಹಾಗೂ ಅನಮೋಲ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಭಯೋತ್ಪಾದನೆ ವಿರೋಧಿ ಕಾನೂನುಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಗಲಭೆಗೆ ಪ್ರಚೋದನೆ, ಕ್ರಿಮಿನಲ್ ಸಂಚು, ಅತಿಕ್ರಮಣ, ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸಲು ಸಾರ್ವಜನಿಕ ಉದ್ಯೋಗಿಗೆ ಅಡ್ಡಿಪಡಿಸುವುದು ಆರೋಪದಲ್ಲಿ ಭಯೋತ್ಪಾದನೆಯ ಕೃತ್ಯಗಳ ವಿರುದ್ಧದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ, ಸಂಸತ್ ಭವನ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.