ಮಂಗಳೂರು(ಬೆಂಗಳೂರು): ಕರ್ನಾಟಕ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಡಿ.17 ರಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಲಕ್ಷಣಗಳು ಇವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಸಾಧಾರಣ ಮಳೆಯಾಗಲಿದೆ. ಒಂದೆರಡು ಕಡೆಗಳಲ್ಲಿ ಮಳೆಯ ಪ್ರಮಾಣ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವುದರ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದ್ದು ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ.