ಮಹಾರಾಷ್ಟ್ರದ ಸೋಲಾರ್ ಇಂಡಸ್ಟ್ರೀಸ್ ನಲ್ಲಿ ಸ್ಪೋಟ- 9 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು(ಮುಂಬೈ): ಮಹಾರಾಷ್ಟ್ರದ ನಾಗ್ಪುರದ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ ಕಂಪನಿಯಲ್ಲಿ ಡಿ.17ರ ಬೆಳಿಗ್ಗೆ ಸುಮಾರು 9.30 ಕ್ಕೆ ನಡೆದ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಈ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯ ವ್ಯವಹಾರ ನಡೆಸುತ್ತಿತ್ತು ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here