ಮಂಗಳೂರು: ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ.
ಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದು, ಇಂದು ಬೆಳಗಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಆತ್ಮಹತ್ಯೆಗೂ ಮುನ್ನ ಸಮುದ್ರ ತೀರದಲ್ಲಿ ಬೈಕನ್ನಿಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್, ಚಪ್ಪಲಿಗಳನ್ನು ಇಟ್ಟಿದ್ದಾರೆ.