ರಾಜ್ಯದಲ್ಲಿ ದಿನ‌ನಿತ್ಯ 5000 ಟೆಸ್ಟ್, 60 ವರ್ಷ ಮೇಲ್ಪಟ್ಟರಿಗೆ ಮಾಸ್ಕ್ ಕಡ್ಡಾಯ-ಮಾಧ್ಯಮಗಳು ಅನಗತ್ಯ ಭಯವನ್ನು ಸೃಷ್ಟಿಸಬಾರದು- ಸಿಎಂ ಸಿದ್ದರಾಮಯ್ಯ

ಮಂಗಳೂರು(ಬೆಂಗಳೂರು): ಕರ್ನಾಟಕದಲ್ಲಿ ಕೋವಿಡ್ ​ ಆತಂಕ ಹೆಚ್ಚಾಗಿದ್ದು, ಈ ಸಂಬಂಧ ಇಂದು ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು ಅಲ್ಲದೆ, ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎನ್ನುವ ಸ್ಪಷ್ಟ ಸೂಚನೆ ಅಧಿಕಾರಿಗಳಿಗೆ ನೀಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಕೋವಿಡ್‌ ಸಂಬಂಧ ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. ಈಗಿನ ಉಪತಳಿ ಜೆಎನ್‌ 1 ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಪ್ರಕರಣ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ಐಸಿಯು ನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ಐಸಿಯು ನಲ್ಲಿದ್ದಾರೆʼ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ದಿನ‌ನಿತ್ಯ 5000 ಟೆಸ್ಟ್ ಗಳು ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಮಾಡಿಕೊಂಡಿದ್ದು ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರು ಹೆಚ್ಚು ಜನಸಂದಣಿ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದ ಅವರು ಕೋವಿಡ್‌ 19 ಸಂಬಂಧ ಜನರಲ್ಲಿ ಮಾಧ್ಯಮಗಳು ಅನಗತ್ಯ ಭಯವನ್ನು ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ. ಎಂದು ಮಾಧ್ಯಮಗಳಿಗೆ ಮನವಿ ಮಾಡಿಕೊಂಡರು.

LEAVE A REPLY

Please enter your comment!
Please enter your name here