ರಾಜ್ಯದಲ್ಲಿ 104 ಜನರಿಗೆ ಕೊರೋನಾ ಪಾಸಿಟಿವ್-ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆ

ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಡಿ.23ರಂದು ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ 85 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ.

 

LEAVE A REPLY

Please enter your comment!
Please enter your name here